ಸುಬ್ರಹ್ಮಣ್ಯ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮತ್ತೆ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಿದೆ.
ಘಟ್ಟ ಪ್ರದೇಶದಲ್ಲಿ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಶುಕ್ರವಾರ ಬೆಳಿಗ್ಗೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
ಹರಿಹರದಲ್ಲಿ 18 ಮನೆಗಳು, ಕಲ್ಮಕಾರಿನಲ್ಲಿ 7 ಮನೆಗಳು, ಕಲ್ಲಮೊಗ್ರದಲ್ಲಿ 6 ಮನೆಗಳಿಗೆ ಹಾನಿಯಾಗಿದೆ.
ಬಾಳಗೋಡಿನಲ್ಲಿ ಒಂದು ಮನೆಗೆ ನೀರು ನುಗ್ಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.