ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗುರುವಾರ ಪಂಚಮಿ ರಥ ಮತ್ತು ಬ್ರಹ್ಮರಥಕ್ಕೆ ಶಿಖರ ಮುಹೂರ್ತ ನಡೆಯಿತು.
ಕ್ಷೇತ್ರ ಪುರೋಹಿತ ಮಧುಸೂದನ ಕಲ್ಲೂರಾಯ ಅವರು ಶಿಖರ ಮುಹೂರ್ತ ನೆರವೇರಿಸಿದರು. ಶಿಖರಗಳಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಬಳಿಕ ಮೂಲನಿವಾಸಿ ಮಲೆಕುಡಿಯ ಜನಾಂಗದವರು ನೂತನ ಶಿಖರವನ್ನು ಬ್ರಹ್ಮರಥಕ್ಕೆ ಅಳವಡಿಸಿದರು. ಬಳಿಕ ಪಂಚಮಿ ರಥಕ್ಕೆ ಶಿಖರ ಅಳವಡಿಸಲಾಯಿತು.
ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್., ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಚಂದ್ರಶೇಖರ ಕೋಡಿಕಜೆ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.