ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಿಸುವಂತೆ ಮುಜರಾಯಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಲ್ಲಿಸಿದ ಪತ್ರ ಸಾಮಾಜಿಕ ಮಾಧ್ಯಮದಲ್ಲಿ ಹರದಾಡುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ನಡುವೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತದಲ್ಲಿರುವುದರಿಂದ, ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಮುಖಂಡರು ಪಕ್ಷದ ಮುಖಂಡರನ್ನು ಭೇಟಿ ಮಾಡಿ ಒತ್ತಡ ಹಾಕುತ್ತಿದ್ದಾರೆ. ಇದರಿಂದಾಗಿ ಸಮಿತಿಗೆ ಸದಸ್ಯರ ನೇಮಕ ವಿಳಂಬವಾಗುತ್ತಿದೆ.
ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 9 ಮಂದಿಯ ಹೆಸರನ್ನು ಪಟ್ಟಿ ಮಾಡಿ ಅವರನ್ನು ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನಾಗಿ ನೇಮಿಸುವಂತೆ ಕೋರಿ ಮುಜರಾಯಿ ಸಚಿವರಿಗೆ ಸಲ್ಲಿಸಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.