ADVERTISEMENT

ಕುಂಬಾರರ ಸಹಕಾರ ಸಂಘದ ಶಾಖೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2022, 6:07 IST
Last Updated 4 ಅಕ್ಟೋಬರ್ 2022, 6:07 IST

ಮಂಗಳೂರು: ‘ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 13ನೇ ಶಾಖೆಯ ಉದ್ಘಾಟನೆ ಅ.5ರಂದು ಬೆಳಿಗ್ಗೆ 9.30ಕ್ಕೆ ಉಳ್ಳಾಲ ತಾಲ್ಲೂಕಿನ ಮುಡಿಪುವಿನ ಪದ್ಮಶ್ರೀ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ’ ಎಂದು ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಜನಾರ್ದನ ಮೂಲ್ಯ ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಸಕ ಯು.ಟಿ. ಖಾದರ್ ನೂತನ ಶಾಖೆ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಭದ್ರತಾ ಕೊಠಡಿ ಮತ್ತು ಮುಡಿಪು ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಟಿ.ಜಿ. ರಾಜರಾಮ್ ಭಟ್ ಕಂಪ್ಯೂಟರ್ ಕೊಠಡಿ ಉದ್ಘಾಟಿಸುವರು. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ. ಪೆರುವಾಯಿ ಅಧ್ಯಕ್ಷತೆ ವಹಿಸುವರು ಎಂದರು.

ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ನಾಯ್ಕ್, ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೊಳಿಯಾರ್, ಮುಡಿಪು ಕುಲಾಲ ಸಂಘದ ಅಧ್ಯಕ್ಷ ಪುಂಡರಿಕಾಕ್ಷ, ಮುಡಿಪು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಕುರ್ನಾಡು ಗ್ರಾಮ ಪಂಚಾಯಿತಿ ಸದಸ್ಯ ಗೋಪಾಲ ಬಂಗೇರ ಮಿತ್ತಕೋಡಿ, ಪದ್ಮಶ್ರೀ ಕಾಂಪ್ಲೆಕ್ಸ್ ಮಾಲೀಕ ನವೀನ್ ಆಚಾರ್ಯ, ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ADVERTISEMENT

ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಂಘವು ನಾಲ್ಕು ಜಿಲ್ಲೆಗಳ ಕಾರ್ಯವ್ಯಾಪ್ತಿಯನ್ನು ಹೊಂದಿದೆ. 1958ರಲ್ಲಿ ಗ್ರಾಮೀಣ ಕುಂಬಾರಿಕೆ ಮತ್ತು ಗುಡಿ ಕೈಗಾರಿಕೆಯ ಅಭಿವೃದ್ಧಿಗಾಗಿ ಗ್ರಾಮೀಣ ಕುಂಬಾರ ಕುಶಲಕರ್ಮಿಗಳನ್ನು ಸದಸ್ಯರನ್ನಾಗಿ ಸೇರಿಸಿಕೊಂಡು, ಪುತ್ತೂರು ತಾಲ್ಲೂಕಿನ ಅರಿಯಡ್ಕ ಮತ್ತು ಮಾಡ್ನೂರು ಗ್ರಾಮಗಳಿಗೆ ಕಾರ್ಯ ವ್ಯಾಪ್ತಿ ಹೊಂದಿ ಅಂದಿನ ಮದ್ರಾಸ್ ಸರ್ಕಾರದ ಅಡಿಯಲ್ಲಿ ಸಂಘ ರಚನೆಯಾಯಿತು. ಪ್ರಸ್ತುತ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿದೆ ಎಂದರು. ಸಹಕಾರ ಸಂಘದ ನಿರ್ದೇಶಕರಾದ ಗಣೇಶ್ ಕುಲಾಲ್, ಶೇಷಪ್ಪ ಕುಲಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.