
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಮಂಗಳವಾರ ನಡೆದ ಬೀಡಿ ಕೆಲಸಗಾರರ ಸಂಘದ ಮಹಾಸಭೆಯಲ್ಲಿ ಸುಕುಮಾರ್ ತೊಕ್ಕೊಟ್ಟು ಮಾತನಾಡಿದರು
ಮೂಡುಬಿದಿರೆ: ಕೇಂದ್ರ ಸರ್ಕಾರ 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ 4 ಸಂಹಿತೆಯಾಗಿ ಹೊಸ ಕಾರ್ಮಿಕ ಕಾನೂನು ಜಾರಿಗೊಳಿಸಿದೆ. ಇದರಿಂದ ಕಾರ್ಮಿಕ ವರ್ಗದ ಎಲ್ಲ ಹಕ್ಕುಗಳಿಗೆ ಅಪಾಯ ಉಂಟಾಗಲಿದೆ ಎಂದು ಸೌತ್ ಕೆನೆರಾ ಬೀಡಿ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಹೇಳಿದರು.
ಇಲ್ಲಿನ ಸಮಾಜ ಮಂದಿರದಲ್ಲಿ ಬೀಡಿ ಕೆಲಸಗಾರರ ಸಂಘದ 23ನೇ ವಾರ್ಷಿಕ ಮಹಾಸಭೆಯನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಮಸ್ಯೆಗಳನ್ನು ಸರಿಪಡಿಸಲು ಆಗ್ರಹಿಸಿ ಫೆ.12ರಂದು ನಡೆಯುವ ಅಖಿಲ ಭಾರತ ಮುಷ್ಕರವನ್ನು ಬೀಡಿ ಕಾರ್ಮಿಕರು ಯಶಸ್ವಿಗೊಳಿಸಬೇಕು. ಕನಿಷ್ಠ ಕೂಲಿ, ತುಟ್ಟಿಭತ್ಯೆ, ಬೋನಸ್, ಸಂಘ ಕಟ್ಟುವ ಹಕ್ಕುಗಳಿಗೆ ತೊಂದರೆಯಾಗಿದೆ. ಬೀಡಿ ಕಾರ್ಮಿಕರಿಗೆ 2018ರಿಂದ 2024ರವರೆಗಿನ ಬಾಕಿ ಕನಿಷ್ಠ ವೇತನ ನೀಡುತ್ತೇವೆ ಎಂದು ಭರವಸೆ ನೀಡಿದ ಮಾಲೀಕರು ಸಮರ್ಪಕವಾಗಿ ವಿತರಿಸಿಲ್ಲ. ರಾಜ್ಯ ಸರ್ಕಾರ ಪ್ರಕಟಿಸಿದ ಕನಿಷ್ಠ ಕೂಲಿ ಜಾರಿಯಾಗಿಲ್ಲ ಎಂದು ಆರೋಪಿಸಿದರು.
ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಜೆ.ಬಾಲಕೃಷ್ಣ ಶೆಟ್ಟಿ, ಕಾರ್ಮಿಕರು ಹಕ್ಕುಗಳನ್ನು ರಕ್ಷಿಸಲು ಸಂಘಟಿತ ಹೋರಾಟ ನಡೆಸಬೇಕಾಗಿದೆ ಎಂದರು.
ಪ್ರಧಾನ ಕಾರ್ಯದರ್ಶಿ ರಾಧಾ ವರದಿ ಮಂಡಿಸಿದರು. ಕೋಶಾಧಿಕಾರಿ ಗಿರಿಜಾ ಲೆಕ್ಕಪತ್ರ ಮಂಡಿಸಿದರು. ಮುಂದಿನ ಅಧ್ಯಕ್ಷೆಯಾಗಿ ರಮಣಿ ಆಯ್ಕೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.