ಬೆಳ್ತಂಗಡಿ: ಇಲ್ಲಿನ ಲಾಯಿಲ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವ ಏ.20ರಿಂದ 23ರವರೆಗೆ ನಡೆಯಲಿದೆ.
ಈ ಸಂಬಂಧ ನಡೆದ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಧ್ಯಕ್ಷರಾಗಿ ಬೆಳ್ತಂಗಡಿಯ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಆಯ್ಕೆಯಾದರು.
‘ಮುಂದಿನ ದಿನಗಳಲ್ಲಿ ಬ್ರಹ್ಮಕಲಶೋತ್ಸವದ ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಭಕ್ತರ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು’ ಎಂದರು.
ಪ್ರತಿಷ್ಠಾನದ ಸಲಹೆಗಾರ ಎ.ಕೃಷ್ಣಪ್ಪ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು.
ಸಲಹೆಗಾರ ಬಿ.ಎ.ಕುಮಾರ ಹೆಗ್ಡೆ, ಮುಖ್ಯ ಅರ್ಚಕ ರಾಘವೇಂದ್ರ ಬಾಂಗ್ಯಣ್ಣಾಯ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಿಠಲ್ ಶೆಟ್ಟಿ, ಸುಜಿತಾ ವಿ.ಬಂಗೇರ, ಲೋಕೇಶ್ವರಿ ವಿನಯ ಚಂದ್ರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ಮಹಾಬಲ ಶೆಟ್ಟಿ ಭಾಗವಹಿಸಿದ್ದರು.
ಸುರೇಶ್ ಶೆಟ್ಟಿ ಲಾಯಿಲ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.