ಉಪ್ಪಿನಂಗಡಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಎಲ್ಲವನ್ನು ಸಾಧ್ಯವಾಗಿಸಿಕೊಳ್ಳಬಹುದು ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಂದೀಶ್ ವೈ.ಡಿ. ಹೇಳಿದರು.
ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ದೀಪ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಧನೆಯ ಮೂಲಕ ಗುರು ವೃಂದದವರಿಗೆ ಗೌರವ ಸಲ್ಲಿಸಬೇಕು. ಅವಕಾಶವನ್ನು ಬಳಸಿಕೊಂಡು ಗುರಿ ಸಾಧಿಸುವಂತೆ ಪ್ರೇರೇಪಿಸಿದರು.
ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ಭಟ್, ಮುಖ್ಯ ಶಿಕ್ಷಕಿ ವೀಣಾ ಆರ್.ಪ್ರಸಾದ್, ಸಹ ಶಿಕ್ಷಕಿ ಶಶಿಕಲಾ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ, ಆಡಳಿತ ಮಂಡಳಿ ಸದಸ್ಯ ಸುಧಾಕರ್ ಶೆಟ್ಟಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಪಿ.ಸಂಜನ್ ರಾವ್ ಸ್ವಾಗತಿಸಿ, ಅಕ್ಷ ವಂದಿಸಿ, ಅನುಷ್ಕಾ ಜೈನ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.