ಬೆಳ್ತಂಗಡಿ ತಾಲ್ಲೂಕಿನ ಇಳಂತಿಲ ಗ್ರಾಮದ ಹಾರಕೆರೆ ಬಳಿ ಗುಡ್ಡೆ ಜರಿದು ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದ ಮಳೆ ಕಡಿಮೆಯಾಗಿದೆ. ಆದರೆ, ಅಲ್ಲಲ್ಲಿ ಗುಡ್ಡ ಕುಸಿತ ಮುಂದುವರೆದಿದೆ.
ಬೆಳ್ತಂಗಡಿ ತಾಲ್ಲೂಕಿನ ಲಾಯಿಲ ಗ್ರಾಮದ ಅಂಕಾಜೆ ಬಳಿ ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ.
ಬೆಳ್ತಂಗಡಿ ತಾಲ್ಲೂಕಿನ ಇಳಂತಿಲ ಗ್ರಾಮದ ಹಾರಕೆರೆ ಬಳಿ ಗುಡ್ಡ ಜರಿದು ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ
ಬೆಳ್ತಂಗಡಿ ತಾಲ್ಲೂಕಿನ ಬಂದಾರು ಗ್ರಾಮದ ಪೆರ್ಲ- ಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ಶುಕ್ರವಾರ ರಾತ್ರಿ ಜಡಿಮಳಿಗೆ ಗುಡ್ಡ ಕುಸಿತವಾಗಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಕೂಡ ಇಲ್ಲಿ ಗುಡ್ಡ ಕುಸಿತಗೊಂಡಿತ್ತು.
ಅದೇ ಗ್ರಾಮದ ಮುರ್ತಾಜೆ ಎಂಬಲ್ಲಿ ಸೇಸಪ್ಪ ಪೂಜಾರಿ ಅವರ ಕೋಳಿ ಶೆಡ್ ಬಳಿ ಕೂಡ ಗುಡ್ಡ ಕುಸಿತವಾಗಿದೆ.
ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆಯ ಭೀತಿ ಎದುರಾಗಿದೆ. ನೇತ್ರಾವತಿ ನದಿಯ ಅಪಾಯದ ಮಟ್ಟ 8.5ಮೀಟರ್ ಆಗಿದ್ದು, ಇದೀಗ ನೀರಿನ ಮಟ್ಟ 7.5 ಮೀಟರ್ ದಾಟಿದೆ. ತಗ್ಗು ಪ್ರದೇಶಗಳಲ್ಲಿಯ ಜನರ ಸ್ಥಳಾಂತರಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.