ಗುಡ್ಡ ಕುಸಿತ ಸಂಭವಿಸಿರಬಹುದು
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಮೀಪ ಮಣ್ಣಗುಂಡಿ ಎಂಬಲ್ಲಿ ಭಾರಿ ಮಳೆಯಿಂದಾಗಿ ಗುರುವಾರ ಗುಡ್ಡ ಕುಸಿತವಾಗಿದ್ದು, ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ.
ಭಾರೀ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಬಿದ್ದಿದ್ದು, ತೆರವಿಗೆ ಕನಿಷ್ಠ 2 -3 ಗಂಟೆ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತದ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ತಿಳಿಸಿದ್ದಾರೆ
ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಗುಡ್ಡ ಕುಸಿತ
ನಿರಂತರ ಮಳೆಗೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ರಸ್ತೆ ಬದಿಯ ಗುಡ್ಡ ಕುಸಿದಿದ್ದು, ಆ ರಸ್ತೆಯಲ್ಲಿ ಸಂಚಾರಕ್ಕೆ ತೊಡಕಾಗಿದೆ.
ಕಾವೂರಿನ ಮುಲ್ಲಕ್ಕಾಡ್ ಫೋರ್ತ್ ಮೇನ್ ನಲ್ಲಿ ಓಮನ ಶೆಟ್ಟಿಗಾರ್ ಅವರ ಮನೆಯ ಎದುರಿನ ಬಾವಿ ಕುಸಿದಿದ್ದು ಮನೆಯ ಅಂಗಳದಲ್ಲೂ ಬಿರುಕು ಕಾಣಿಸಿಕೊಂಡಿದೆ. ಕುಟುಂಬ ಹಾಗೂ ಸುತ್ತಮುತ್ತಲ ಮನೆಮಂದಿ ಆತಂಕದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.