ಉಪ್ಪಿನಂಗಡಿ (ದಕ್ಷಿಣ ಕನ್ನಡ): ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಂಗಳವಾರ ಸಂಜೆ ಗುಡ್ಡದ ಮಣ್ಣು ರಸ್ತೆಗೆ ಕುಸಿದು ಮಂಗಳೂರು-ಬೆಂಗಳೂರು ಮಧ್ಯೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂಬಂಧ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಕುಸಿಯುತ್ತಿದೆ. ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಮಂಗಳವಾರ ಸುರಿದ ಮಳೆಯಿಂದಾಗಿ ಸಂಜೆ ವೇಳೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.
ಮಣ್ಣು ರಸ್ತೆಗೆ ಬಿದ್ದಿರುವುದರಿಂದ ಬಸ್ ಹಾಗೂ ಭಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆಗೆ ಬಿದ್ದ ಮಣ್ಣನ್ನು ಹೆದ್ದಾರಿ ಪ್ರಾಧಿಕಾರದವರು ತೆರವು ಮಾಡುತ್ತಿದ್ದಾರೆ. ಆದರೂ ಮಣ್ಣು ಬೀಳುತ್ತಲೇ ಇದೆ ಎಂದು ಉಪ್ಪಿನಂಗಡಿ ಸಬ್ ಇನ್‌ಸ್ಪೆಕ್ಟರ್ ಅವಿನಾಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.