ADVERTISEMENT

ಸೂರಿಕುಮೇರು ಬಳಿ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 7:45 IST
Last Updated 11 ಜುಲೈ 2022, 7:45 IST
   

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.ಸ್ಥಳೀಯರು ಮಣ್ಣನ್ನು ತೆರವುಗೊಳಿಸಲು ಯತ್ನಿಸುತ್ತಿದ್ದು, ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT