ವಿಟ್ಲ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪನಿಯು ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸದೆ ಇರುವುದರಿಂದ ಮಳೆಗೆ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬೀಳುತ್ತಿದೆ.
ಸಮರ್ಪಕವಾಗಿ ಕಾಮಗಾರಿ ನಡೆಸದೆ ಇರುವುದರಿಂದ ಅಲ್ಲಲ್ಲಿ ಸಮಸ್ಯೆ ಉಂಟಾಗಿದೆ. ಅಗತ್ಯವಿರುವ ಕಡೆ ತಡೆಗೋಡೆಯನ್ನೇ ನಿರ್ಮಿಸಿಲ್ಲ. ಕೆಲವು ಕಡೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಇದರಿಂದಾಗಿ ಹಲವು ಮನೆಗಳು, ವಿದ್ಯುತ್ ಕಂಬಗಳು ಕುಸಿಯುವ ಹಂತದಲ್ಲಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.