ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಉಳ್ಳಾಲ ತಾಲ್ಲೂಕು ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದಹಿತ್ತಿಲುಕೋಡಿಕೊಪ್ಪಲು ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಇದರಿಂದ ಪ್ರೇಮಾ ಪೂಜಾರಿ ಮತ್ತು ಅವರ ಮೊಮ್ಮಕ್ಕಳಾದ ಮೂರು ವರ್ಷದ ಆರ್ಯನ್ ಮತ್ತು ಎರಡು ವರ್ಷದ ಆರುಷ್ ಅಸುನೀಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.