ADVERTISEMENT

ಮಂಗಳೂರು: ಸತತ ಎರಡನೇ ದಿನವೂ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 4:31 IST
Last Updated 12 ಸೆಪ್ಟೆಂಬರ್ 2020, 4:31 IST
ಮಂಗಳೂರಿನಲ್ಲಿ ಮಳೆ
ಮಂಗಳೂರಿನಲ್ಲಿ ಮಳೆ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯೂ ಮಳೆ ಮುಂದುವರಿದಿದ್ದು, ಶನಿವಾರ ಬೆಳಿಗ್ಗೆ ಸ್ವಲ್ಪ ಬಿಡುವು ನೀಡಿದೆ.
ನಗರದ ಜಪ್ಪಿನ ಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.

ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲೂ ಶುಕ್ರವಾರ ರಾತ್ರಿ ಮಳೆಯಾಗಿದ್ದು, ಬಂಟ್ವಾಳ ಪೇಟೆ ಹಾಗೂ ಬಿಸಿ ರೋಡ್ ಮಧ್ಯೆ ನೀರು ನಿಂತಿತ್ತು. ನೇತ್ರಾವತಿ ನದಿ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT