ಮಂಗಳೂರು: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ಕಿನ್ಯದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅಲ್ಪಸಂಖ್ಯಾತ ಸಮುದಾಯಗಳಾದ ಕ್ರೈಸ್ತ ಮತ್ತು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟಿ ಕೋಮು ದ್ವೇಷ ಹುಟ್ಟಿಸುವ ಮಾತುಗಳನ್ನು ಆಡಿದ್ದಾರೆ. ಅವರನ್ನು ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು ಎಂದು ಬೆಳ್ತಂಗಡಿಯ ವಕೀಲ ವಿನೋದ್ ಮಸ್ಕರೇನ್ಹಸ್ ಒತ್ತಾಯಿಸಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಅರುಣ್ ಉಳ್ಳಾಲ್ ಅವರು ಕಾರ್ಯಕ್ರಮದಲ್ಲಿ ಆಡಿದ್ದ ಮಾತುಗಳು ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯದ ಪರಿಕಲ್ಪನೆಗಳಿಗೆ ವಿರುದ್ಧವಾಗಿವೆ. ಆ ಮಾತುಗಳನ್ನು ನಾವು ಖಂಡಿಸುತ್ತೇವೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಹೋದರೆ ಶಾಂತಿ ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಅಪಾಯವಿದೆ. ಜನರ ನಡುವೆ ಅಪನಂಬಿಕೆ ಸೃಷ್ಟಿಸುವ ಇಂತಹ ಪ್ರಯತ್ನಗಳಿಗೆ ಸರ್ಕಾರ ಅವಕಾಶ ನೀಡಬಾರದು‘ ಎಂದರು.
ಸುದ್ದಿಗೋಷ್ಠಿಯಲ್ಲಿ ವಕೀಲರಾದ ರೆನ್ಸಿ ಡಿಸಿಲ್ವ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.