ಪುತ್ತೂರು: ಗೆಜ್ಜೆಗಿರಿ ಕ್ಷೇತ್ರವು ಧಾರ್ಮಿಕತೆಯ ಮೂಲಕ ಸಾಮಾಜಿಕ ಜಾಗೃತಿಯ ಕೆಲಸ ಮಾಡುತ್ತಿದ್ದು, ನವರಾತ್ರಿಯ ಧಾರ್ಮಿಕ ಕಾರ್ಯಕ್ರಮಗಳು ನಮ್ಮ ಅಂತರಾತ್ಮವನ್ನು ಬೆಳಗಿಸಲಿ ಎಂದು ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವರದರಾಜ ಉಪ್ಪಿನಂಗಡಿ ಹೇಳಿದರು.
ದೇಯಿಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನವಾದ ಪುತ್ತೂರು ತಾಲ್ಲೂಕಿನ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಸೋಮವಾರ ಅವರು ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿಪೂಜಾರಿ ಚಿಲಿಂಬಿ ಮಾತನಾಡಿ, ನವರಾತ್ರಿಯಲ್ಲಿ ನಿತ್ಯ ಮಹಾ ಮಾತೆ ದೇಯಿ ಬೈದ್ಯೆತಿಗೆ ವಿಶೇಷ ಅಲಂಕಾರ ಪೂಜೆ,ಅನ್ನದಾನ ಸೇವೆ, ವಾಹನ ಪೂಜೆ, ವಿಜಯ ದಶಮಿ ದಿನ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಕ್ಷೇತ್ರದ ಶಿವಾನಂದ ತಂತ್ರಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ., ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು, ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕ್ಷೇತ್ರದ ಮೊಕ್ತೇಸರ ಶ್ರೀಧರ ಪೂಜಾರಿ, ಪ್ರಮುಖರಾದ ಆರ್.ಸಿ ನಾರಾಯಣ ರೆಂಜ, ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಪೂಜಾರಿ ಕುರಿಕ್ಕಾರ, ಮಂಗಳೂರಿನ ಮಾಜಿ ಮೇಯರ್ ಹೇಮಲತಾ ರಘು ಸಾಲ್ಯಾನ್, ಶಾಲಿನಿ ರವಿ ಪೂಜಾರಿ, ರೇಖಾ ನಾಗರಾಜ್, ಪ್ರದೀಪ ಪೂಜಾರಿ, ಜನಾರ್ದನ ಪೂಜಾರಿ ನೂಜ ಉಪಸ್ಥಿತರಿದ್ದರು.
ಪಟ್ಟೆಯ ಆದಿಶಕ್ತಿ ಮಹಿಳಾ ಭಜನಾದಿಂದ ಭಜನಾ ಸಂಕೀರ್ತನೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.