ADVERTISEMENT

ಗ್ರಂಥಾಲಯ; ಸಮಯ ಪರಿಪಾಲನೆ ಮುಖ್ಯ- ಡಾ.ಕುಮಾರ್

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 7:30 IST
Last Updated 8 ಸೆಪ್ಟೆಂಬರ್ 2022, 7:30 IST

ಮಂಗಳೂರು: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಇರುವ ಗ್ರಂಥಾಲಯಗಳು ಸ್ಥಳೀಯ ಗ್ರಾಮಸ್ಥರಿಗೆ ಪ್ರೇರಣೆ ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಹೇಳಿದರು.

ಬುಧವಾರ ಇಲ್ಲಿ ನಡೆದ ಗ್ರಂಥಾಲಯ ಮೇಲ್ವಿಚಾರಕರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿರುವ ಗ್ರಂಥಾಲಯಗಳು ಗ್ರಾಮೀಣಾಭಿವೃದ್ಧಿ ಇಲಾಖೆಯ ಭಾಗವಾಗಿ ಕಾರ್ಯನಿರ್ವಹಿಸುತ್ತಿವೆ. ಅಲ್ಲಿನ ಮೇಲ್ವಿಚಾರಕರು ಹೊಣೆಗಾರಿಕೆ ಹಾಗೂ ಅಭಿರುಚಿಯಿಂದ ಕೆಲಸ ಮಾಡಬೇಕು ಎಂದರು.

ಮೇಲ್ವಿಚಾರಕರು ಮುಖ್ಯವಾಗಿ ಸಮಯ ಪರಿಪಾಲಿಸಬೇಕು, ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರ ವರೆಗಿನ ಗ್ರಂಥಾಲಯಗಳನ್ನು ತೆರೆಯಬೇಕು. ಗ್ರಾಮ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಶಾಲೆ, ಕಾಲೇಜು ವಿದ್ಯಾರ್ಥಿಗಳ ಪಟ್ಟಿಯನ್ನು ಇಟ್ಟುಕೊಳ್ಳಬೇಕು. ಗ್ರಾಮದ ಪ್ರತಿ ಕುಟುಂಬದ ಒಬ್ಬರನ್ನಾದರೂ ಗ್ರಂಥಾಲಯದ ಸದಸ್ಯರನ್ನಾಗಿ ನೋಂದಾಯಿಸಿಕೊಳ್ಳಬೇಕು. ಡಿಜಿಟಲ್ ಲೈಬ್ರರಿಗಳು ಕ್ರಿಯಾಶೀಲವಾಗಿರಬೇಕು. 8,9,10ನೇ ತರಗತಿ, ಪಿ.ಯು.ಸಿ ಹಾಗೂ ಪದವಿ ಕಾಲೇಜುಗಳ ಪಠ್ಯ ಪುಸ್ತಕಗಳ ಪಿಡಿಎಫ್ ಕಾಪಿಗಳು ದೊರೆಯಬೇಕು ಹಾಗೂ ಅವುಗಳನ್ನು ಸುಲಭವಾಗಿ ಪೆನ್‍ಡ್ರೈವ್‍ನಲ್ಲಿ ವಿದ್ಯಾರ್ಥಿಗಳು ಪಡೆಯುವಂತಿರಬೇಕು ಎಂದು ಸಲಹೆ ನೀಡಿದರು.

ADVERTISEMENT

ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ, ಶಿಕ್ಷಣ ಫೌಂಡೇಷನ್‍ನ ಸಂಯೋಜಕ ರಕ್ಷಿತ್, ಗ್ರಂಥಾಲಯಗಳ ಮೇಲ್ವಿಚಾರಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.