ADVERTISEMENT

‘ರೈತರಿಗೆ ಅಡಿಕೆ ಅಡಮಾನ ಸಾಲ’

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 17:06 IST
Last Updated 4 ಏಪ್ರಿಲ್ 2020, 17:06 IST

ಮಂಗಳೂರು: ಕೊರೊನಾ ವೈರಾಣು ಹರಡುವಿಕೆಯ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರೈತಾಪಿ ವರ್ಗ ಸಂಕಷ್ಟದಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತುರ್ತಾಗಿ ಅಡಿಕೆ ಅಡಮಾನ ಸಾಲವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲು ಮುಂದಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದಿದ್ದು, ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರಿಗೆ ಆರ್ಥಿಕ ತುರ್ತು ಸಾಲದ ನೆರವನ್ನು ನೀಡಲು ಎಸ್‌ಸಿಡಿಸಿಸಿ ಬ್ಯಾಂಕ್ ಮುಂದಾಗಿದೆ. ಈ ನಿಟ್ಟಿನಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಅಡಿಕೆ ಅಡಮಾನ ಸಾಲವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕಿಗೆ ರೈತರೇ ಆಸ್ತಿ. ಸದ್ಯ ಕೊರೊನಾ ಮಹಾಮಾರಿಯಿಂದ ರೈತರ ಪರಿಸ್ಥಿತಿ ಬಿಗಡಾಯಿಸಿದೆ. ರೈತರು ಬೆಳೆದಿರುವ ಕೃಷಿ ಉತ್ಪನ್ನಗಳು ಸರಿಯಾದ ಮಾರುಕಟ್ಟೆ ಇಲ್ಲದೆ ಹಾಳಾಗುತ್ತಿವೆ. ಇದೀಗ ರೈತರಿಗೆ ಅಡಿಕೆಯೇ ಜೀವನಾಧಾರವಾಗಿದೆ. ಹೀಗಾಗಿ ರೈತರಿಗೆ ತುರ್ತು ಅಡಿಕೆ ಅಡಮಾನ ಸಾಲವನ್ನು ಎಲ್ಲ ಕೃಷಿ ಪತ್ತಿನ ಸಹಕಾರ ಸಂಘಗಳು ನೀಡುವಂತೆ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.