ADVERTISEMENT

ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ: ಚುನಾವಣಾ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2024, 4:00 IST
Last Updated 25 ಏಪ್ರಿಲ್ 2024, 4:00 IST
24ಪಿಟಿಆರ್3 : ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾದ ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ ಅವರು ಮತದಾನಕ್ಕೆ ಸಂಬಂಧಿಸಿ ಮಾಹಿತಿ ನೀಡಿದರು.
24ಪಿಟಿಆರ್3 : ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾದ ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ ಅವರು ಮತದಾನಕ್ಕೆ ಸಂಬಂಧಿಸಿ ಮಾಹಿತಿ ನೀಡಿದರು.   

ಪುತ್ತೂರು: ‘ಮತದಾರರು ಮತ ಚಲಾಯಿಸಲು ಮತಗಟ್ಟೆಯೊಳಗೆ ಪ್ರವೇಶಿಸುವ ವೇಳೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ. ಮತಗಟ್ಟೆಯೊಳಗೆ ಪ್ರವೇಶಿಸುವ ಮುನ್ನ ತಮ್ಮ ಮೊಬೈಲ್‌ ಅನ್ನು ಕಡ್ಡಾಯವಾಗಿ ಮತಗಟ್ಟೆಯ ಸಹಾಯ ಕೇಂದ್ರದಲ್ಲಿಟ್ಟು ಟೋಕನ್ ಪಡೆದುಕೊಂಡು ಹೋಗಿ ಮತ ಚಲಾಯಿಸಬೇಕು, ಬಳಿಕ ಟೋಕನ್ ತೋರಿಸಿ ಮೊಬೈಲ್ ಪಡೆದುಕೊಳ್ಳಬೇಕು’ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಜುಬಿನ್ ಮೊಹಾಪಾತ್ರ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತಮ್ಮ ಬೂತ್ ತೆರೆಯಬಹುದು. ಆದರೆ, ಒಂದು ಬೂತ್‌ನಲ್ಲಿ ಇಬ್ಬರಿಗಿಂತ ಹೆಚ್ಚು ಮಂದಿ ಇರಬಾರದು. ಇದ್ದಲ್ಲಿ ಚುನಾವಣಾ ಆಯೋಗದ ನಿಯಮ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದರು. 10 ಅಡಿ ಅಗಲ ಮತ್ತು 10 ಅಡಿ ಉದ್ದದ ಒಂದು ಪೆಂಡಾಲ್ ಹಾಕಿ ಬೂತ್ ರಚಿಸಿಕೊಳ್ಳಬಹುದು. ಅದರ ಮೇಲೆ ಪಕ್ಷದ ಒಂದು ಧ್ವಜ, ಒಂದು ಬ್ಯಾನರ್ ಅಳವಡಿಸಬಹುದು. ಒಂದು ಟೇಬಲ್ ಹಾಕಿಕೊಂಡು ಇಬ್ಬರು ಮಾತ್ರ ಕೂರಬಹುದು’ ಎಂದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಗುರುವಾರ ಪುತ್ತೂರಿನ ತೆಂಕಿಲ ವಿವೇಕಾನಂದ ಪ್ರೌಢಶಾಲೆಯಲ್ಲಿ ನಡೆಯಲಿದೆ. ಗುರುವಾರ ಸಂಜೆಯೇ ಮತಯಂತ್ರಗಳ ಜೋಡಣೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು. ಪುತ್ತೂರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಹನಮ ರೆಡ್ಡಿ, ತಹಶೀಲ್ದಾರ್ ಕುಂಞ ಅಹ್ಮದ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.