ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೈನಿಕರು, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು ಮತ್ತು ಉಪವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪ ಇದೆ. ಫಲಾನುಭವಿಗಳಿಗೆ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನೀಡುವಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಸರ್ಕಾರಿ ನೌಕರರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು ನಿವೇಶನ ನೀಡಲು ಕ್ರಮ ಕೈಗೊಂಡಿಲ್ಲ. ಈ ಕಾರಣಕ್ಕೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.