ADVERTISEMENT

ಲಾರಿ-ಬೈಕ್ ಡಿಕ್ಕಿ: ಇಬ್ಬರಿಗೆ ತೀವ್ರ ಗಾಯ

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 14:01 IST
Last Updated 5 ಜುಲೈ 2018, 14:01 IST
ಲಾರಿಯ ಅಡಿಯಲ್ಲಿ ಸಿಲುಕಿಕೊಂಡಿರುವ ಬೈಕ್. (ವಿಟ್ಲ ಚಿತ್ರ)
ಲಾರಿಯ ಅಡಿಯಲ್ಲಿ ಸಿಲುಕಿಕೊಂಡಿರುವ ಬೈಕ್. (ವಿಟ್ಲ ಚಿತ್ರ)   

ವಿಟ್ಲ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಗುರುವಾರ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಪಾಟ್ರಕೋಡಿ ನಿವಾಸಿಗಳಾದ ಬಿಲಾಲ್ ಮತ್ತು ಅಲ್ತಾಫ್ ಗಂಭೀರ ಗಾಯಗೊಂಡ ಸವಾರರು.ಬೈಕ್‌ಗೆ ಡಿಕ್ಕಿ ಹೊಡೆದಿದ್ದೂ ಅಲ್ಲದೆ ರಸ್ತೆಯ ಬದಿಗೆ ಲಾರಿ ಬೈಕನ್ನು ಎಳೆದುಕೊಂಡು ಹೋಗಿದೆ. ಇದರಿಂದ ಬೈಕ್ ಸವಾರರಿಬ್ಬರೂ ಗಂಭೀರ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.