ADVERTISEMENT

ಆಮಿಷದ ಮತಾಂತರ ಸಂವಿಧಾನ ವಿರೋಧಿ: ವಿಶ್ವ ಹಿಂದೂ ಪರಿಷತ್ ಮುಖಂಡ

​ಪ್ರಜಾವಾಣಿ ವಾರ್ತೆ
Published 18 ಜೂನ್ 2023, 10:50 IST
Last Updated 18 ಜೂನ್ 2023, 10:50 IST

ಬಂಟ್ವಾಳ: ರಾಜ್ಯದಲ್ಲಿ ಐದು ವರ್ಷಗಳಿಂದ ಮತಾಂತರ ಮತ್ತಿತರ ಸಂವಿಧಾನ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದರಿಂದ ಶಾಂತಿ ನೆಲೆಸಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಮೂಲಕ ಆಮಿಷ ಸಹಿತ ಬೆದರಿಕೆ ಮತ್ತು ಬಲಾತ್ಕಾರದ ಮೂಲಕ ಮತಾಂತರ ಮಾಡಲು ಅವಕಾಶ ನೀಡಿ ಸಮಾಜದಲ್ಲಿ ಮತ್ತೆ ಕೋಮು ಸಂಘರ್ಷಕ್ಕೆ ಪ್ರೇರಣೆ ನೀಡಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ, ವಕೀಲ ಪ್ರಸಾದ್ ಕುಮಾರ್ ರೈ ಆರೋಪಿಸಿದ್ದಾರೆ.

ಇಲ್ಲಿನ ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಓಟ್ ಬ್ಯಾಂಕ್‌ಗಾಗಿ ತುಷ್ಟೀಕರಣ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ದೇಶದ ಮೂಲ ಅಸ್ಮಿತೆ ಆಗಿರುವ ಹಿಂದೂ ಧರ್ಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಟೀಕಿಸಿದರು.

ಎಲ್ಲಾ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಧಾರ್ಮಿಕ ಶಿಕ್ಷಣ ನೀಡುವ ಬಗ್ಗೆ ಸಂಘಟನೆ ಚಿಂತನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಗುರುರಾಜ್ ಬಂಟ್ವಾಳ್, ಸಂತೋಷ್ ಸರಪಾಡಿ, ದೀಪಕ್ ಅಜೆಕಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.