ADVERTISEMENT

ಇಡೀ ವಿಶ್ವದಲ್ಲಿ ಗಾಂಧಿ ವಿಚಾರಧಾರೆ ಪ್ರಸ್ತುತ: ಬಿ.ರಮಾನಾಥ ರೈ

​ಪ್ರಜಾವಾಣಿ ವಾರ್ತೆ
Published 31 ಜನವರಿ 2025, 5:03 IST
Last Updated 31 ಜನವರಿ 2025, 5:03 IST
ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗಾಂಧಿ ಪುಣ್ಯ ಸ್ಮರಣೆ ಅಂಗವಾಗಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಲಾಯಿತು
ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗಾಂಧಿ ಪುಣ್ಯ ಸ್ಮರಣೆ ಅಂಗವಾಗಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಲಾಯಿತು   

ಮಂಗಳೂರು: ಪ್ರಧಾನಿ ಮೋದಿ ವಿದೇಶಕ್ಕೆ ಹೋದಾಗ ಗಾಂಧೀಜಿ ಪುತ್ಥಳಿಗೆ ತಲೆಬಾಗುತ್ತಾರೆ, ಇಲ್ಲಿ ಗಾಂಧಿ ಅವರನ್ನು ಅಪಹಾಸ್ಯ ಮಾಡುತ್ತಾರೆ. ಗಾಂಧಿ ಬಗ್ಗೆ ಪ್ರಧಾನಿಗೆ ತಿಳಿದಿರದ ಸಂಗತಿಗಳು ಇರಬಹುದು, ಆದರೆ ಜಗತ್ತಿಗೆ ಗೊತ್ತಿದೆ. ಅವರ ವಿಚಾರಧಾರೆ, ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಸತ್ಯ, ಅಹಿಂಸೆಯನ್ನು ಪ್ರತಿಪಾದಿಸಿದ್ದ ಗಾಂಧಿ ನುಡಿದಂತೆ ಬದುಕಿದ್ದ ಅಪರೂಪದ ಮಹಾನ್ ವ್ಯಕ್ತಿ. ಗಾಂಧಿ ಎಂದರೆ ಕೇವಲ ವ್ಯಕ್ತಿಯಲ್ಲ, ಜೀವನ ವಿಧಾನ ಎಂದರು.

ADVERTISEMENT

ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ನಗರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಪ್ರಮುಖರಾದ ಕೆ.ಕೆ.ಶಾಹುಲ್ ಹಮೀದ್, ಜೋಕಿಂ ಡಿಸೋಜ, ದಿನೇಶ್ ಮೂಳೂರು, ಟಿ.ಹೊನ್ನಯ್ಯ, ನೀರಜ್ ಚಂದ್ರಪಾಲ್, ಟಿ.ಕೆ.ಸುಧೀರ್, ಶಬ್ಬೀರ್ ಸಿದ್ದಕಟ್ಟೆ, ಕೆ.ಅಪ್ಪಿ, ಸಬಿತಾ ಮಿಸ್ಕಿತ್, ಚಂದ್ರಕಲಾ ಜೋಗಿ, ಮಂಜುಳಾ ನಾಯಕ್, ಜಾರ್ಜ್, ದುರ್ಗಾ ಪ್ರಸಾದ್, ಸೌಹಾನ್ ಎಸ್.ಕೆ, ಸಮರ್ಥ್ ಭಟ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.