ಬೆಳ್ತಂಗಡಿ: ‘ಸಮಯಪ್ರಜ್ಞೆ, ಸರಳ ಜೀವನ, ಸ್ವಚ್ಛತೆ, ಸೇವಾ ಮನೋಭಾವದ ಗಾಂಧೀಜಿ ಬದುಕು ನಮಗೆ ಪ್ರೇರಣೆಯಾಗಬೇಕು' ಎಂದು ದಕ್ಷಿಣ ಕನ್ನಡ ಜಿಲ್ಲಾ ಗಮಕ ಕಲಾ ಪರಿಷತ್ತು ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ಹೇಳಿದರು.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಣ, ಕೆ.ಎಂ ನಾಗೇಶ್ ಕುಮಾರ್ ಗೌಡ , ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಗ್ಯಾರಂಟಿ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರದೀಪ್ ಕೆ ಸಿ, ನೇಮಿರಾಜ್ ಕಿಲ್ಲೂರು, ಅಬ್ದುಲ್ ಕರೀಂ, ವಂದಾನ ಭಂಡಾರಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.