
ಬೆಳ್ತಂಗಡಿ (ದಕ್ಷಿಣ ಕನ್ನಡ): 2012ರಲ್ಲಿ ಕುತ್ಲೂರು ಬಳಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣಕ್ಕೆ ಸಂಬಂಧಿಸಿ ನಕ್ಸಲ್ ಮಹೇಶ್ (49) ಎಂಬುವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಮಹೇಶ್ ಅವರನ್ನು ಕೇರಳ ಪೊಲೀಸರು ಭದ್ರತೆಯೊಂದಿಗೆ ಕರೆ ತಂದಿದ್ದರು. ಮೂಲತಃ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ಅಂಬೇಡ್ಕರ್ ಕಾಲೊನಿಯ ಮಹೇಶ್‌ಗೆ ಜಯಣ್ಣ, ಜಾನ್, ಮಾರಪ್ಪ ಎಂಬ ಹೆಸರುಗಳೂ ಇವೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುತ್ಲೂರು ಲಿಂಗಪ್ಪ ಮಲೆಕುಡಿಯ ಅವರ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದ್ದರಿಂದ ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದೆ. ಆರು ತಿಂಗಳಿಂದ ಕೇರಳದ ಜೈಲಿನಲ್ಲಿರುವ ಮಹೇಶ್, ಕರ್ನಾಟಕದ ನಕ್ಸಲ್ ಮುಖಂಡರೊಂದಿಗೆ ಮುಖ್ಯಮಂತ್ರಿ ಮುಂದೆ ಶರಣಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.