
ಮಹೇಶ್ ಶೆಟ್ಟಿ ತಿಮರೋಡಿ
ಉಜಿರೆ (ದಕ್ಷಿಣ ಕನ್ನಡ): ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಎರಡನೇ ಬಾರಿಗೆ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಮರುಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಇದೀಗ ಹೈಕೋರ್ಟ್ ಆದೇಶದಂತೆ ಮರುಪರಿಶೀಲನೆ ಮಾಡಿ ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಡಿ.17ರಂದು ಆದೇಶ ಹೊರಡಿಸಲಾಗಿದೆ.
ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದಿದ್ದು, ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಗುರುವಾರ ಪೊಲೀಸರು ನೋಟಿಸ್ ಜಾರಿಗೆ ಹೋದಾಗ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.