ಮಹೇಶ್ ಶೆಟ್ಟಿ ತಿಮರೋಡಿ
ಮಂಗಳೂರು: ‘ಪೊಲೀಸರು ಅಧಿಕಾರ ದುರುಪಯೋಗಪಡಿಸಿಕೊಂಡು, ನನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಆರೋಪಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್‌ಎಚ್‌ಆರ್‌ಸಿ) ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
‘ನನ್ನ ವಿರುದ್ಧ ಬ್ರಹ್ಮಾವರ, ಕಾರ್ಕಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಒಟ್ಟು ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸುಳ್ಳು ಆರೋಪ ಹೊರಿಸಿ, ರಾಜಕೀಯ ದುರುದ್ದೇಶದಿಂದ ದಾಖಲಿಸಿರುವ ಎಫ್‌ಐಆರ್ ಗಳಿವು. ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು. ಈ ಬಗ್ಗೆ ಸ್ವತಂತ್ರ ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ಅವರು ಕೋರಿದ್ದಾರೆ.
‘ನನಗೆ, ನನ್ನ ಕುಟುಂಬಕ್ಕೆ, ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಒದಗಿಸಬೇಕು. ಹೋರಾಟಗಾರರನ್ನು ಹಾಗೂ ರಾಜಕೀಯ ವಿರೋಧಿಗಳನ್ನು ಮಟ್ಟಹಾಕಲು ಕ್ರಿಮಿನಲ್ ಕಾನೂನುಗಳ ದುರ್ಬಳಕೆ ತಡೆಯಲು ಸರ್ಕಾರ ಹಾಗೂ ಗೃಹಸಚಿವಾಲಯ ಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುವಂತೆ ಆಯೋಗವು ಶಿಫಾರಸು ಮಾಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.