
ಪ್ರಜಾವಾಣಿ ವಾರ್ತೆ
ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿ ಸಮೇತರಾಗಿ ಬಂದು ಮಂಜುನಾಥ ಭಂಡಾರಿ ಅವರ ಆರೋಗ್ಯ ವಿಚಾರಿಸಿದರು
ಮಂಗಳೂರು: ಅನಾರೋಗ್ಯದ ಕಾರಣ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋಮವಾರ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.
ಪತ್ನಿ ಜೊತೆ ಬಂದಿದ್ದ ಅವರು, ಭಂಡಾರಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಬಳಿ ಸಮಾಲೋಚನೆ ನಡೆಸಿದರು ಎಂದು ಭಂಡಾರಿ ಅವರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭಂಡಾರಿ ಅವರು ಶೀಘ್ರ ಗುಣಮುಖರಾಗುವಂತೆ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದರು. ಕದ್ರಿ ಮಂಜುನಾಥ ದೇವಸ್ಥಾನ, ದರ್ಗಾ, ಮಸೀದಿ, ಚರ್ಚ್‌ಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.