ADVERTISEMENT

ಅಪೌಷ್ಟಿಕತೆ ಸಮಾಜಕ್ಕೆ ಮಾರಕ: ಡಾ.ಕುಮಾರ್

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2021, 8:49 IST
Last Updated 23 ಮಾರ್ಚ್ 2021, 8:49 IST
ಪೋಷಣ್ ಪಕ್ವಾಡ್ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ಉದ್ಘಾಟಿಸಿದರು.
ಪೋಷಣ್ ಪಕ್ವಾಡ್ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ಉದ್ಘಾಟಿಸಿದರು.   

ಮಂಗಳೂರು: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀ ಒಕ್ಕೂಟದ ವತಿಯಿಂದ ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಪಕ್ವಾಡ್ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ಉದ್ಘಾಟಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಪಾಪಾ ಭೋವಿ ಇದ್ದರು.

‘ಅಪೌಷ್ಟಿಕತೆ ಸಮಾಜಕ್ಕೆ ಮಾರಕ. ಸರ್ಕಾರ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪೌಷ್ಟಿಕ ಆಹಾರ ನೀಡುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಇಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಆರೋಗ್ಯ ಹಳಿ ತಪ್ಪಿದಂತೆ ಎಲ್ಲರೂ ಜಾಗೃತಿ ವಹಿಸಬೇಕು. ಆರೋಗ್ಯ ಅತಿ ಮುಖ್ಯ. ಜಿಲ್ಲೆಯಲ್ಲಿ 112 ಮಂದಿ ಅಪೌಷ್ಟಿಕತೆ ಉಳ್ಳ ಮಕ್ಕಳನ್ನು ಪತ್ತೆ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರು ಮನೆ ಭೇಟಿ ಮಾಡಿ ಇಂತಹ ಮಕ್ಕಳಿಗೆ ಪೌಷ್ಟಿಕಾಹಾರ ನೀಡುತ್ತಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.