ADVERTISEMENT

ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ಆಯ ತಪ್ಪಿ ಬಿದ್ದು ಸಾವು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 7:31 IST
Last Updated 11 ಏಪ್ರಿಲ್ 2025, 7:31 IST
   

ಉಳ್ಳಾಲ (ದಕ್ಷಿಣ ಕನ್ನಡ): ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟದಲ್ಲಿ ನಡೆದಿದೆ.

ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ ತನ್ನ ಮನೆ ತೋಟವೊಂದರ ಬಳಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಅವರು ಮೃತಪಟ್ಟರು.

' ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿ ಕಾರಣಕ್ಕೆ ಪ್ರಜ್ಞೆ ತಪ್ಪಿಬಿದ್ದಿದ್ದರು. ಲೋ ಬಿಪಿಯಿಂದಲೇ ತೆಂಗಿನ ಮರದಿಂದ ಬಿದ್ದಿರುವ ಸಾಧ್ಯತೆಯೂ ಇದೆ' ಎಂದು ಅವರ ಆಪ್ತರು ತಿಳಿಸಿದ್ದಾರೆ. ಯಶೋಧರ್ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.