ಬಂಧನ (ಸಾಂದರ್ಭಿಕ ಚಿತ್ರ)
ಮಂಗಳೂರು: ನಗರದ ಗಡಿಯಾರ ಗೋಪುರದ ಬಳಿಯ ರಾಜಾಜಿ ಉದ್ಯಾನದಲ್ಲಿ ವ್ಯಕ್ತಿಯೊಬ್ಬನು ಸೋಮವಾರ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಅಶ್ಲೀಲವಾಗಿ ವರ್ತಿಸಿದ್ದು, ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಶ್ಲೀಲ ವರ್ತನೆ ತೋರಿದ ವ್ಯಕ್ತಿಯನ್ನು ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಗಸ್ತು ನಿರತರಾಗಿದ್ದ ದಕ್ಷಿಣ ಠಾಣೆಯ ಹೆಡ್ ಕಾನ್‌ಸ್ಟೆಬಲ್ ದೇವೇಂದ್ರಪ್ಪ ಅವರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.
ಆರೋಪಿಯು ರಾಜಾಜಿ ಉದ್ಯಾನದ ಮುಖ್ಯ ಗೇಟಿನ ಬಳಿ ಗಾಂಧಿ ಪ್ರತಿಮ ಹತ್ತಿರ ಕಟ್ಟೆಯ ಮೇಲೆ ಕುಳಿತು ಸಾರ್ವಜನಿಕವಾಗಿ ತನ್ನ ಗುಪ್ತಾಂಗವನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿದ್ದ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.