ADVERTISEMENT

ಬೆಳ್ತಂಗಡಿ | ಕಾಡಾನೆ ದಾಳಿ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 9:35 IST
Last Updated 17 ಜುಲೈ 2025, 9:35 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

(ಎ.ಐ ಚಿತ್ರ)

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿಯಲ್ಲಿ ಕಾಡಾನೆ ದಾಳಿಗೆ ಒಬ್ಬರು ಮೃತಪಟ್ಟಿದ್ದಾರೆ‌.

ADVERTISEMENT

ಸೌತಡ್ಕ ನಿವಾಸಿ ಬಾಲಕೃಷ್ಣ (60) ಮೃತರು‌. ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಕಾಡಾನೆಗಳ ಹಿಂಡು ಬಂದಿದ್ದು, ಸ್ಥಳೀಯರು ಓಡಿಸುವ ವೇಳೆ ಆನೆ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ‌‌.

ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.