ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ₹ 5.05 ಲಕ್ಷ ವಂಚಿಸಿದ ಬಗ್ಗೆ ನಗರದ ಪೂರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಇನ್ಸ್ಟಾಗ್ರಾಂನಲ್ಲಿ ಮೇ 7ರಂದು ಜಾಹಿರಾತು ನೋಡಿದ್ದೆ. ಕ್ರಿಪ್ಟೊ ಕರೆನ್ಸಿಯಲ್ಲಿ ಹಣವನ್ನು ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸುವ ವಿವರಗಳು ಅದಲ್ಲಿದ್ದವು. ನಾನು ಹಂತ ಹಂತವಾಗಿ ₹ ₹ 5.05 ಲಕ್ಷ ಹೂಡಿಕೆ ಮಾಡಿದ್ದೆ. ಆದರೆ, ಆರೋಪಿಗಳು ಭರವಸೆ ನೀಡಿದಂತೆ ಹಣವನ್ನು ಮರಳಿಸದೇ ವಂಚಿಸಿದ್ದಾರೆ ಎಂಬುದಾಗಿ ಸಂತ್ರಸ್ತ ವ್ಯಕ್ತಿಯೊಬ್ಬರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.