ಶಿರಾಡಿ (ಉಪ್ಪಿನಂಗಡಿ): ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶದ ಕಾರ್ಮಿಕನೊಬ್ಬ ಶಿರಾಡಿ ಘಾಟ್ ಪ್ರದೇಶದಲ್ಲಿ ಮೂತ್ರ ವಿಸರ್ಜನೆಯ ನೆಪದಲ್ಲಿ ಬಸ್‌ನಿಂದ ಇಳಿದಿದ್ದು, ಬಳಿಕ ಓಡಿ ಕಣ್ಮರೆಯಾದ ಬಗ್ಗೆ ಬಸ್ ನಿರ್ವಾಹಕ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ ಮಧ್ಯಪ್ರದೇಶದ ಕಾರ್ಮಿಕರ ತಂಡವೊಂದು ಪ್ರಯಾಣಿಸುತ್ತಿತ್ತು. ಪುತ್ತೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡಲು ಬರುತ್ತಿದ್ದ ಈ ತಂಡವನ್ನು ಸೇರಿಕೊಂಡಿದ್ದ ಶ್ರೀಪಾಲ್ ನರ್ರೆ (37) ಎಂಬಾತ ಶಿರಾಡಿ ಘಾಟ್ ಪ್ರವೇಶಿಸುತ್ತಿದ್ದಂತೆ ಬಸ್ ನಿಲ್ಲಿಸುವಂತೆ ವಿನಂತಿಸುತ್ತಿದ್ದ. ಮೂತ್ರ ವಿಸರ್ಜನೆಯ ಕಾರಣಕ್ಕೆ ಬಸ್ ನಿಲ್ಲಿಸಲು ಹೇಳುತ್ತಿದ್ದಾನೆ ಎಂದು ಭಾವಿಸಿದ ನಿರ್ವಾಹಕ ಬಸ್ ನಿಲ್ಲಿಸಲು ಸೂಚನೆ ನೀಡಿದ್ದರು. ಬಸ್ ನಿಂತ ಕೂಡಲೇ ಇಳಿದು ಹೆದ್ದಾರಿಯಲ್ಲಿ ಹಿಂದಕ್ಕೆ ಓಡಿ ಹೋಗಿದ್ದ. ಆತನಿಗಾಗಿ ಸ್ವಲ್ಪ ಹೊತ್ತು ಕಾದು ಬಳಿಕ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಬಂದು ನಿರ್ವಾಹಕ ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಸ್ಥಳ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಾಗಿದ್ದು, ಕಣ್ಮರೆಯಾದ ವ್ಯಕ್ತಿಯ ಆಧಾರ್ ಕಾರ್ಡ್ ಮೊದಲಾದ ಮಾಹಿತಿಯನ್ನು ಸಂಗ್ರಹಿಸಿ, ಬಸ್ ಪ್ರಯಾಣ ಮುಂದುವರಿಸುವಂತೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.