
ಪ್ರಜಾವಾಣಿ ವಾರ್ತೆ
ಜೈಲು (ಪ್ರಾತಿನಿಧಿಕ ಚಿತ್ರ)
ಸುಳ್ಯ: ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣದಲ್ಲಿ ಸೆಲ್ವಕುಮಾರ್ ಎಂಬಾತನಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿದೆ.
ಸೆಲ್ವಕುಮಾರ್ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಮತ್ತೆ ಆರು ತಿಂಗಳ ಸಾಧಾರಣ ಶಿಕ್ಷೆ ಅನುಭವಿಸಬೇಕು ಎಂದು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಸೆಲ್ವ ಕುಮಾರ್ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆಗ ತನಿಖಾಧಿಕಾರಿಯಾಗಿದ್ದ ಆಂಜನೇಯ ರೆಡ್ಡಿ ಅವರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಕೀಲ ಪುಷ್ಪರಾಜ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.