ADVERTISEMENT

ಕುಕ್ಕೆಗೆ ಸಂಸದೆ ಸುಮಲತಾ ಭೇಟಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 12:51 IST
Last Updated 16 ಡಿಸೆಂಬರ್ 2019, 12:51 IST
 ಮಂಡ್ಯ ಸಂಸದೆ ಸುಮಲತ ಭಾನುವಾರ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದರು
 ಮಂಡ್ಯ ಸಂಸದೆ ಸುಮಲತ ಭಾನುವಾರ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದರು   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭಾನುವಾರ ಮಂಡ್ಯ ಸಂಸದೆ ಸುಮಲತಾ ಹಾಗೂ ಪುತ್ರ ಅಭಿಷೇಕ್ ಗೌಡ ಭೇಟಿ ನೀಡಿ ದೇವರ ದರ್ಶನ ಹಾಗೂ ವಿಶೇಷ ಸೇವೆಗಳನ್ನು ಸಲ್ಲಿಸಿದರು.

ಬೆಳಿಗ್ಗೆ ದೇಗುಲಕ್ಕೆ ಆಗಮಿಸಿದ ಅವರು ಆಶ್ಲೇಷಬಲಿ, ನಾಗಪ್ರತಿಷ್ಠೆ, ಪವಮಾನ ಅಭಿಷೇಕ, ಶೇಷ ಸೇವೆ ನೆರವೇರಿಸಿದರು. ಹೊಸೊಳಿಗಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ಬಳಿಕ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಅಲ್ಲಿ ಆಶ್ಲೇಷ ಸೇವೆ ನೆರವೇರಿಸಿಕೊಂಡರು. ಅವರ ಭೇಟಿ ಖಾಸಗಿ ಹಿನ್ನಲೆಯಲ್ಲಿ ಭೇಟಿ ವೇಳೆ ಅವರು ಪೊಟೊ ತೆಗೆಸಿಕೊಳ್ಳಲು ನಿರಾಕರಿಸಿದರು. ಭೇಟಿ ವೇಳೆ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT