ADVERTISEMENT

ಮಂಗಳೂರು ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2025, 10:42 IST
Last Updated 17 ಜನವರಿ 2025, 10:42 IST
<div class="paragraphs"><p>ಸಿದ್ದರಾಮಯ್ಯ, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ, ಮುಖ್ಯಮಂತ್ರಿ

   

ಮಂಗಳೂರು: ನಗರಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಕೋಟೆಕಾರು ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಆರೋಪಿಗಳ ಶೀಘ್ರ ಪತ್ತೆಗೆ ಸೂಚನೆ ನೀಡಿದರು.

ಘಟನೆ ಕುರಿತು ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿ, 'ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್‌ಗಳನ್ನು ದಾಟಿ ಹೋಗಿದ್ದಾರೆ? ಟೋಲ್‌ಗಳಲ್ಲಿ ಯಾಕೆ ತಪಾಸಣೆ ಬಿಗಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾಗಿ ಮೂಲಗಳು ತಿಳಿಸಿವೆ.

ADVERTISEMENT

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.‌

ಎಲ್ಲ ಟೋಲ್ ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂದಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.