ಮಂಗಳೂರು: ಇಲ್ಲಿನ ಬೊಕ್ಕಪಟ್ಟಣ ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ನಾಲ್ಕು ಗ್ರಾಮಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಪುರಸ್ಕರಿಸಲಾಯಿತು.
ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತಮೊಕ್ತೇಸರ ಲಕ್ಷ್ಮಣ್ ಅಮೀನ್ ಕೋಡಿಕಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ, ಕದ್ರಿಯ ಮೊಗವೀರ ಏಳು ಪಟ್ಟಣ ಸಂಯುಕ್ತ ಸಭಾದ ಅಧ್ಯಕ್ಷ ಸುಭಾಸ್ ಚಂದ್ರ ಕಾಂಚನ್, ಗುರಿಕಾರ್ ಮಾಧವ ಪುತ್ರನ್, ದೈವಸ್ಥಾನದ ಅಧ್ಯಕ್ಷ ಲೋಕೇಶ್ ಸುವರ್ಣ ಮುಂತಾದವರು ವೇದಿಕೆಯಲ್ಲಿದ್ದರು.
ವಿವಿಧ ಗ್ರಾಮಗಳ ಗುರಿಕಾರರು, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
ಅಧ್ಯಕ್ಷ ಲೋಕೇಶ್ ಸುವರ್ಣ ಪ್ರಾಸ್ತಾವಿಕ ಮಾತನಾಡಿದರು. ಪ್ರವೀಣ್ ಮೆಂಡನ್ ವಂದಿಸಿದರು. ತೃಪ್ತಿ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.