ADVERTISEMENT

ಕೊರೊನಾ: ಕಾಂಗ್ರೆಸ್ ನಿಂದ ಕಾರ್ಯಪಡೆ ರಚನೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 10:18 IST
Last Updated 4 ಏಪ್ರಿಲ್ 2020, 10:18 IST

ಮಂಗಳೂರು:ಕೊರೊನಾ ಸಂದರ್ಭದಲ್ಲಿ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಪಿಸಿಸಿಯಿಂದ ಕಾರ್ಯಪಡೆಗಳನ್ನು ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ ಮಾಜಿ ಶಾಸಕ ಜೆ.ಆರ್.ಲೋಬೊ ಅಧ್ಯಕ್ಷ ಮತ್ತು ಸುಬೋಧ ಆಳ್ವ ಕಾರ್ಯದರ್ಶಿಗಳಾಗಿದ್ದಾರೆ.

ಈ ಬಗ್ಗೆ ಶನಿವಾರ ಇಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ' ಕೊರೊನಾ ಪರಿಣಾಮ ಸಂಕಷ್ಟದಲ್ಲಿ ಇರುವ ಜನರಿಗೆ ಪಕ್ಷದ ಮುಖಂಡರು ಸ್ಪಂದಿಸುತ್ತಿದ್ದು, ಸಮಿತಿಯು ಸಮನ್ವಯದ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಜನರಿಗೆ ಸರ್ಕಾರದ ವತಿಯಿಂದ ಸಿಗಬೇಕಾದ ಸೌಲಭ್ಯಗಳ ಬಗ್ಗೆಯೂ ನಿಗಾ ವಹಿಸಲಿದ್ದು, ಚ್ಯುತಿ ಕಂಡುಬಂದಲ್ಲಿ ಸರ್ಕಾರವನ್ನು ಎಚ್ಚರಿಸಲಿದೆ' ಎಂದರು.

'ಸರ್ಕಾರ ಬರೀ ಭರವಸೆಗಳನ್ನು ನೀಡುತ್ತಿದೆ. ಲಾಕ್ ಡೌನ್ ಆಗಿ 14 ದಿನಗಳಾದರೂ ಜನರಿಗೆ ಯಾವುದೇ ಒಂದು ಸೌಲಭ್ಯವನ್ನೂ ತಲುಪಿಸಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಪಾದಿಸಿದರು.

ADVERTISEMENT

'ಈ ಹಿಂದಿನ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಸಂದರ್ಭದಲ್ಲಿ ಪ್ರತಿ ಬಡವರಿಗೆ ಬಿಪಿಎಲ್ ಕಾರ್ಡ್ ಮೂಲಕ ಎರಡು ತಿಂಗಳಿಗೆ 14 ಕೆಜಿ ಅಕ್ಕಿ ನೀಡುತ್ತಿತ್ತು. ಇವರು ಲಾಕ್ ಡೌನ್ ಸಂದರ್ಭದಲ್ಲಿ 2 ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿವಹೇಳಿದ್ದು, ವಿತರಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಅಲ್ಲದೇ, ಗೋಧಿ ಇನ್ನೂ ಬಂದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ದೂರಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.