ಮಂಗಳೂರು: ಕೋವಿಡ್-19 ಸೋಂಕಿನಿಂದ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದ 58 ವರ್ಷದ ವೃದ್ಧೆ ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ನಗರದ ಬೋಳೂರಿನ ಈ ವೃದ್ಧೆಗೆ ಸೋಂಕು ತಗಲಿರುವುದು ದೃಢವಾಗಿತ್ತು. ಅಲ್ಲದೇ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ದಿನದಿಂದಲೂ ಈ ವೃದ್ಧೆಗೆ ವೆಂಟಿಲೇಟರ್ ಅಳವಡಿಸಲಾಗಿತ್ತು.ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.