
ಪ್ರಜಾವಾಣಿ ವಾರ್ತೆ
ಮಂಗಳೂರು: ಇಲ್ಲಿನ ಕೈಕಂಬ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮೂರು ಮನೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದ್ದು, ಹಲವು ಮನೆಗಳು ಅಪಾಯದಲ್ಲಿದೆ.
ಮುಂಜಾನೆಯಿಂದ ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು ಮಣ್ಣಿನ ಅಡಿಯಲ್ಲಿ ಮಕ್ಕಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳನ್ನು ರಕ್ಷಣೆ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.
ಸುಮಾರು200 ರಿಂದ 250 ರಷ್ಟು ಮಂದಿ ಸ್ಥಳದಲ್ಲಿ ಸೇರಿದ್ದು ಸಾರ್ವಜನಿಕರು ಸ್ಥಳಕ್ಕೆ ಬರದಂತೆ ಪೊಲೀಸರು ತೆರಳಿ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಅಲ್ಲಿ ವಾಸವಿರುವವರನ್ನು ಸ್ಥಳಾಂತರ ಮಾಡುವಂತಹ ಕ್ರಮವನ್ನು ಕೂಡಾ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.