ADVERTISEMENT

ಇಂದಿನಿಂದ ಮಂಗಳೂರು ದಸರಾ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2018, 17:32 IST
Last Updated 9 ಅಕ್ಟೋಬರ್ 2018, 17:32 IST
ಮಂಗಳೂರು ದಸರಕ್ಕಾಗಿ ಕುದ್ರೂಳಿಯಲ್ಲಿ ಬೀದಿ ದೀಪಗಳಿಂದ ಅಲಂಕೃತಗೊಂಡಿರುವುದು. ಪ್ರಜಾವಾಣಿ ಚಿತ್ರ
ಮಂಗಳೂರು ದಸರಕ್ಕಾಗಿ ಕುದ್ರೂಳಿಯಲ್ಲಿ ಬೀದಿ ದೀಪಗಳಿಂದ ಅಲಂಕೃತಗೊಂಡಿರುವುದು. ಪ್ರಜಾವಾಣಿ ಚಿತ್ರ   

ಮಂಗಳೂರು: ಮಂಗಳೂರು ದಸರಾ ಎಂದೇ ಖ್ಯಾತವಾದ ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಬುಧವಾರ ಬೆಳಿಗ್ಗೆ 11.50ಕ್ಕೆ ನವದುರ್ಗೆಯರು ಮತ್ತು ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಆರಂಭವಾಗಲಿದೆ.

ಇದೇ 14ರಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಗಳೂರು ದಸರಾಕ್ಕೆ ಚಾಲನೆ ನೀಡಲಿದ್ದು, 19ರಂದು ಸಂಜೆ 4ರಿಂದ ಶಾರದಾ ಮಾತೆಯ ಶೋಭಾಯಾತ್ರೆ ನಡೆಯಲಿದೆ.

ನಗರದ ಮಂಗಳಾದೇವಿ ದೇವಸ್ಥಾನ, ಕಟೀಲಿನ ದುರ್ಗಾಪರಮೇಶ್ವರಿ ದೇವಸ್ಥಾನ ಸಹಿತ ಕರಾವಳಿ ಭಾಗದ ಹಲವಾರು ದೇವಿ ಮಂದಿರಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.