
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಮಂಗಳೂರು: ಪಟಾಕಿ ಅಂಗಡಿ ಮಾಲೀಕನನ್ನು ಬೆದರಿಸಿ ಸುಲಿಗೆ ಮಾಡಲು ಯತ್ನಿಸಿದ ಇಬ್ಬರ ವಿರುದ್ಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್‌ನ ಫಾಜಿಲ್ ಕೊಲೆ ಆರೋಪಿ, ರೌಡಿಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಆತನ ಗೆಳೆಯ ಅಶ್ವಿತ್ ಆರೋಪಿಗಳು.
ಅ.22ರಂದು ದಾಮೋದರ್ ಎಂಬವರ ಅಂಗಡಿಗೆ ಹೋದ ಇಬ್ಬರೂ ಹಣ ನೀಡುವಂತೆ ಬೆದರಿಸಿದ್ದಾರೆ. ಹೆದರಿಕೆಯಿಂದ ದಾಮೋದರ್ ದೂರು ನೀಡಲು ಹಂಜರಿದಿದ್ದರು. ರಕ್ಷಣೆಯ ಭರವಸೆ ನೀಡಿದ ನಂತರ ದೂರು ದಾಖಲಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.