ಮೂಡುಬಿದಿರೆ: ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಛಾಯಾಗ್ರಾಹಕನ ವಿರುದ್ಧ ಪೊಲೀಸರು ದಲಿತ ದೌರ್ಜನ್ಯ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ (31) ಆರೋಪಿ. ಆತ ಉಡುಪಿ ಮೂಲದ ಯುವತಿಯೊಂದಿಗೆ ಇನ್‌ಸ್ಟ್ರಾಗ್ರಾಂನಲ್ಲಿ ಸ್ನೇಹ ಬೆಳೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಸಂತ್ರಸ್ತೆ ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.