
ಬಂಧನ (ಸಾಂದರ್ಭಿಕ ಚಿತ್ರ)
ಮಂಗಳೂರು: ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ಪೊಲೀಸರು, ನಾಲ್ವರನ್ನು ಬಂಧಿಸಿ, ಒಟ್ಟು ₹50 ಸಾವಿರ ಮೌಲ್ಯದ 6.39 ಗ್ರಾಂ ಎಂಡಿಎಂಎ, 0.87 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಪುತ್ತೂರಿನ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರಿಷ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) ಹಾಗೂ ಆರೋಪಿಗಳಿಗೆ ಮಾದಕ ವಸ್ತು ಎಂಡಿಎಂಎ ನೀಡುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂಬುವರನ್ನು ಬಂಧಿಸಲಾಗಿದೆ.
ಆರೋಪಿಗಳು ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ ಮೊಬೈಲ್ ಫೋನ್‌ಗಳು, ಎರಡು ಕಾರು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗ್ರಾಮಾಂತರ ಠಾಣೆ ಪಿಎಸ್‌ಐ ಗುಣಾಪಾಲ ಜೆ ನೇತೃತ್ವದ ತಂಡದಲ್ಲಿ ಸಬ್ ಇನ್‌ಸ್ಪೆಕ್ಟರ್ ಸುಷ್ಮಾ ಭಂಡಾರಿ, ಸಿಬ್ಬಂದಿ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ, ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿ ಅದ್ರಾಮ್, ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.