ADVERTISEMENT

ಎಕ್ಕೂರು: ಉರುಳಿದ ಲಾರಿ– ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 11:03 IST
Last Updated 13 ಸೆಪ್ಟೆಂಬರ್ 2025, 11:03 IST
   

ಮಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಗರದ ಹೊರ ವಲಯದ ಎಕ್ಕೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉರುಳಿ ಬಿದ್ದಿದೆ. ಹೆದ್ದಾರಿಯಲ್ಲಿ ಮರದ ದಿಮ್ಮಿಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಅಪಘಾತದಿಂದಾಗಿ ಈ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗಳಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ನಗರದಿಂದ ಉಳ್ಳಾಲ ಕಡೆಗೆ ಹೋಗುವ ವಾಹನಗಳು ಕಿಲೊ ಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿವೆ. ಎಕ್ಕೂರಿನಿಂದ ಪಂಪ್‌ವೆಲ್‌ವರೆಗೂ ವಾಹನಗಳ ಸಾಲು ಮುಂದುವರಿದಿತ್ತು. ಈ ಸಂಚಾರ ದಟ್ಟಣೆ ನಡುವೆ ಎರಡು ಆಂಬುಲೆನ್ಸ್‌ಗಳೂ ಸಿಲುಕಿಕೊಂಡವು. ಬಳಿ ಇತರ ವಾಹನಗಳನ್ನು ಪಕ್ಕಕ್ಕೆ ಸರಿಸಿ ಆಂಬುಲೆನ್ಸ್‌ಗಳಿಗೆ ದಾರಿ ಮಾಡಿಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT