ಉಪ್ಪಿನಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಸರ್ಕಾರಿ ಕಾಲೇಜುಗಳ ಅಹ್ವಾನಿತ ಕಬಡ್ಡಿ ಟೂರ್ನಿಯಲ್ಲಿ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಗೆದ್ದುಕೊಂಡಿದೆ.
ಲೀಗ್ ಮಾದರಿಯಲ್ಲಿ ನಡೆದ ಟೂರ್ನಿಯಲ್ಲಿ ಉಪ್ಪಿನಂಗಡಿ ಕಾಲೇಜಿನ ತಂಡವು ಬೆಟ್ಟಂಪಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ಆತಿಥೇಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ತಂಡಗಳೊಂದಿಗೆ ಸೆಣಸಾಡಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ತಂಡದ ಸಾಹುಲ್ ಸಫ್ರೀಜ್ ಉತ್ತಮ ದಾಳಿಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ತಂಡದಲ್ಲಿ ಸಂತ್, ರಕ್ಷಿತ್, ಅಕ್ಷಯ್, ಕಾರ್ತಿಕ್, ಸಾಹುಲ್ ಸಫರಿಜ್, ದೇವಿಪ್ರಸಾದ್, ಝೈನ್, ಸಚಿನ್, ಲೋಹಿತ್, ಜಿತೇಶ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.