ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಶುಕ್ರವಾರ ನಿಗದಿಯಾಗಿದ್ದ ಎಂಬಿಎ ಪ್ರಥಮ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.
ಬಜಪೆ ಠಾಣೆ ವ್ಯಾಪ್ತಿಯಲ್ಲಿ ಹಿಂದುತ್ವವಾದಿ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯ ಬಂದ್‌ಗೆ ಕರೆ ನೀಡಿತ್ತು. ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಸಂಸ್ಥೆಯ ಬಸ್ ಸಂಚಾರ ಸ್ಥಗಿತಗೊಂಡಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಖಾಸಗಿ ವಾಹನಗಳು ಮಾತ್ರ ಸಂಚರಿಸುತ್ತಿವೆ.
'ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಎಂಬಿಎ ಪರೀಕ್ಷೆ ಮುಂದೂಡಲಾಗಿದ್ದು, ಕುಲಪತಿ ಜೊತೆ ಚರ್ಚಿಸಿ ಮುಂದಿನ ದಿನಾಂಕ ನಿರ್ಧರಿಸಲಾಗುವುದು. ಉಡುಪಿ ಜಿಲ್ಲೆಯ ಒಂದು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಎಂಬಿಎ ಕೋರ್ಸ್ ಇದೆ ಎಂದು ವಿವಿಯ ಪರೀಕ್ಷಾಂಗ ಕುಲಸಚಿವ ದೇವೇಂದ್ರಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.