ADVERTISEMENT

ಪದವಿ ವಿದ್ಯಾರ್ಥಿಗಳಿಗೆ ಶೀಘ್ರ ಪರಿಷ್ಕೃತ ವೇಳಾಪಟ್ಟಿ

ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 16:42 IST
Last Updated 4 ಡಿಸೆಂಬರ್ 2020, 16:42 IST
ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಕೆ. ರಾಜು ಮೊಗವೀರ ಅವರು, ವಿವಿಯ ಪದವಿ ಕಾಲೇಜಿಗೆ ಭೇಟಿ ನೀಡಿದರು
ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಕೆ. ರಾಜು ಮೊಗವೀರ ಅವರು, ವಿವಿಯ ಪದವಿ ಕಾಲೇಜಿಗೆ ಭೇಟಿ ನೀಡಿದರು   

ಮಂಗಳೂರು: ’ಮಂಗಳೂರು ವಿಶ್ವವಿದ್ಯಾಲಯವು ಶೀಘ್ರದಲ್ಲೇ ಯುಜಿಸಿ ನಿಯಮಗಳ ಅನ್ವಯ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದೆ’ ಎಂದು ಕುಲಸಚಿವ ಕೆ. ರಾಜು ಮೊಗವೀರ ಹೇಳಿದರು.

ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿಗೆ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯೊಂದಿಗೆ ಮಾತನಾಡಿದರು.

’ಪರಿಷ್ಕೃತ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳು, ಪೋಷಕರು, ಪ್ರಾಧ್ಯಾಪಕರು ಆತಂಕ ಪಡಬೇಕಾಗಿಲ್ಲ. ಪದವಿಯ ಎಲ್ಲ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತೂ ಪ್ರಯತ್ನಗಳು ನಡೆಯುತ್ತಿವೆ’ ಎಂದರು.

ADVERTISEMENT

’ಈಗಾಗಲೇ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಸಭೆ ನಡೆಸಲಾಗಿದೆ. ಮುಖ್ಯವಾಗಿ ಕಾಲೇಜಿಗೆ ಬರುವ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಮೂಡಬೇಕು’ ಎಂದ ಅವರು, ಅತಿಥಿ ಉಪನ್ಯಾಸಕರ ನೇಮಕಾತಿ ಪಟ್ಟಿಯನ್ನು ವಾರಾಂತ್ಯದೊಳಗೆ ಬಿಡುಗಡೆ ಮಾಡುವುದಾಗಿ ಹೇಳಿದರು.

‘ವಿಶ್ವವಿದ್ಯಾಲಯ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು. ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಂಡು ಅಭಿವೃದ್ಧಿ ಪಥದತ್ತ ಮುನ್ನಡೆಯಬೇಕು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆಗೆ ಗಮನ ಹರಿಸುವಂತೆಯೂ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ., ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.