
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ‘ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ‘ಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ.
ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣ ಪ್ರಕಾಶ್ ಉಳಿತ್ತಾಯ ಅವರ 'ಬಲಿಪ ಮಾರ್ಗ’ ಹಾಗೂ ‘ಅಗರಿ ಮಾರ್ಗ' ಕೃತಿಗಳು ಆಯ್ಕೆಯಾಗಿವೆ.
ಯಕ್ಷಮಂಗಳ ಪ್ರಶಸ್ತಿಯು ₹25 ಸಾವಿರ ನಗದು, ಯಕ್ಷಮಂಗಳ ಕೃತಿ ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ಮಾರ್ಚ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಗಣೇಶ್ ಸಂಜೀವ್, ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇ ಶಕ ಧನಂಜಯ ಕುಂಬ್ಳೆ ತಿಳಿಸಿ ದ್ದಾರೆ.
‘ಕೇಂದ್ರಕ್ಕೆ ₹ 1 ಕೋಟಿ ನೆರವು– ಭರವಸೆ
ಮಂಗಳೂರು ವಿಶ್ವವಿದ್ಯಾನಿಲಯದ ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಕೇಂದ್ರದ ಅಧ್ಯಯನ ಹಾಗೂ ಸಂಶೋಧನೆ ವಿಸ್ತರಿಸಲು ಉದ್ಯಮಿ ಬೆಂಗಳೂರಿನ ದಯಾನಂದ ಪೈ ಅವರು ₹ 1 ಕೋಟಿಯ ವಿಶೇಷ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಯಾನಂದ ಪೈಗಳು ಭಾಗವಹಿಸಲಿದ್ದು ಆ ದಿನ ಈ ಮೊತ್ತವನ್ನು ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.